ಕೋಟಾ: ರಾಜಸ್ಥಾನದ ಸ್ವಾಯಿ ಮಧೋಪುರ್ ಜಿಲ್ಲೆಯಲ್ಲಿ ಮಂಗಳವಾರ 18 ವರ್ಷ ವಯಸ್ಸಿನ, ನೀಟ್ ಪರೀಕ್ಷಾರ್ಥಿಯೊಬ್ಬರು ಪಿ.ಜಿ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದು, ರಾಜ್ಯದಲ್ಲಿ ನೀಟ್ ಪರೀಕ್ಷಾರ್ಥಿ ಆತ್ಮಹತ್ಯೆ ಮಾಡಿಕೊಂಡ 7ನೇ ಪ್ರಕರಣ. ಮೃತನನ್ನು ಅಂಕುಶ್ ಮೀನಾ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಮುನ್ನ ವಿದ್ಯಾರ್ಥಿ ಯಾವುದೇ ಪತ್ರ ಬರೆದಿಟ್ಟಿಲ್ಲ. ಆದರೆ, ‘ಆತ್ಮಹತ್ಯೆಗೆ ಪ್ರೇಮವೈಫಲ್ಯ ಕಾರಣ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.