ADVERTISEMENT

ಅಲ್ಪಸಂಖ್ಯಾತ ಕಾಲೇಜುಗಳಿಗೂ ನೀಟ್‌ ಅನ್ವಯ: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 20:12 IST
Last Updated 29 ಏಪ್ರಿಲ್ 2020, 20:12 IST
   

ನವದೆಹಲಿ: ವೈದ್ಯಕೀಯ, ದಂತ ವೈದ್ಯ ಕೋರ್ಸ್‌ನ ಪ್ರವೇಶಕ್ಕೆರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯೇ (ನೀಟ್‌) ಆಧಾರ. ಅಲ್ಪಸಂಖ್ಯಾತ ಸಮುದಾಯ ಮತ್ತು ಖಾಸಗಿ ಸಂಸ್ಥೆಗಳು ನಡೆಸುವ ಕಾಲೇಜುಗಳಿಗೂ ನೀಟ್‌ಅನ್ವಯ. ಈ ಪರೀಕ್ಷೆಯ ಆಧಾರದಲ್ಲಿ ಪ್ರವೇಶ ನೀಡುವುದರಿಂದ ಅಲ್ಪಸಂಖ್ಯಾತ ಸಮುದಾಯಗಳು ನಡೆಸುವ ಕಾಲೇಜುಗಳ ಹಕ್ಕಿನ ಉಲ್ಲಂಘನೆ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ವೈದ್ಯಕೀಯ, ದಂತ ವೈದ್ಯ ಕೋರ್ಸ್‌ಪ್ರವೇಶಕ್ಕಾಗಿ ತಮ್ಮದೇ ಆದ ಪರೀಕ್ಷೆ ನಡೆಸಲು ಅಲ್ಪಸಂಖ್ಯಾತ ಸಮುದಾಯದವರ ಸಂಸ್ಥೆಗಳಿಗೆ ಅವಕಾಶ ನೀಡುವಂತೆ ಕೋರಿ ವೆಲ್ಲೂರಿನ ಕ್ರಿಶ್ಚಿಯನ್‌ ಮೆಡಿಕಲ್‌ ಕಾಲೇಜ್‌ ಹಾಗೂ ಇತರ ಸಂಸ್ಥೆಗಳು ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ವಜಾ ಮಾಡಿದೆ.

ನೀಟ್‌ ಮೂಲಕ ಪ್ರವೇಶ ನೀಡುವಂತೆ ನಿರ್ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ, ಈ ವಾದವನ್ನು ಕೋರ್ಟ್‌ ಮಾನ್ಯ ಮಾಡಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.