ಸಾಂದರ್ಭಿಕ ಚಿತ್ರ
ನವದೆಹಲಿ: ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಪಂಕಜ್ ಕುಮಾರ್ ಅಲಿಯಾಸ್ ಆದಿತ್ಯ ಅವರನ್ನು ಪಟ್ನಾದ ವಿಶೇಷ ನ್ಯಾಯಾಲಯವೊಂದು 14 ದಿನಗಳವರೆಗೆ ಸಿಬಿಐ ವಶಕ್ಕೆ ಒಪ್ಪಿಸಿದೆ.
ಕುಮಾರ್ ಅವರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಪ್ರಶ್ನೆಪತ್ರಿಕೆಗಳನ್ನು ಕದ್ದಿದ್ದರು ಎಂದು ಆರೋಪಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇವರು ವಹಿಸಿದ್ದ ಪಾತ್ರ, ಪಡೆದ ಹಣದ ಕುರಿತ ವಿವರ, ಕಳ್ಳತನದಲ್ಲಿ ಭಾಗಿಯಾಗಿದ್ದ ಇತರರ ಕುರಿತು ಸಿಬಿಐ ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.