ನವದೆಹಲಿ: ನೀಟ್ ಪಿಜಿ 2023 ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಮಾರ್ಚ್ 5ರಂದು ದೇಶದ ವಿವಿಧ 902 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 2,08,898 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿಯು (ಎನ್ಬಿಇಎಂಎಸ್) ದಾಖಲೆಯ 10 ದಿನದಲ್ಲಿ ಫಲಿತಾಂಶ ಪ್ರಕಟಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.
‘ಇಂದು ಫಲಿತಾಂಶ ಪ್ರಕಟಿಸಲಾಗಿದೆ. ಅರ್ಹತೆ ಪಡೆದಿರುವ ಎಲ್ಲರಿಗೂ ಅಭಿನಂದನೆಗಳು. ದಾಖಲೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಿದ ಮಂಡಳಿಗೆ ಅಭಿನಂದಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.