ನವದೆಹಲಿ: ತೃತೀಯ ಲಿಂಗಿಗಳಿಗೆ ನೀಟ್–ಪಿಜಿ 2025ರ ಪರೀಕ್ಷೆಯಲ್ಲಿ ವಿವಿಧ ಮೀಸಲಾತಿ ವರ್ಗಗಳ ನಡುವೆ ಸಮತಳ ಮೀಸಲಾತಿಯ ಸೌಲಭ್ಯ ಕಲ್ಪಿಸಬೇಕು ಎಂಬ ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೋಮವಾರ ಸೂಚಿಸಿದೆ.
ಪರೀಕ್ಷೆಯು ಜೂನ್ 15ಕ್ಕೆ ನಿಗದಿಯಾಗಿದೆ. ಮೂವರು ತೃತೀಯ ಲಿಂಗಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠವು ಒಪ್ಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.