ADVERTISEMENT

ನೀಟ್‌: ಇಡಬ್ಲ್ಯೂಎಸ್‌ಗೆ ಮೊದಲಿನಂತೆಯೇ ₹8 ಲಕ್ಷ ಆದಾಯ ಮಿತಿ ಮುಂದುವರಿಕೆ– ಕೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಜನವರಿ 2022, 7:31 IST
Last Updated 2 ಜನವರಿ 2022, 7:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಮೂಲಕ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜನವರಿ 6ರಂದು ಕೈಗೆತ್ತಿಕೊಳ್ಳಲಿದೆ.

₹8 ಲಕ್ಷ ವಾರ್ಷಿಕ ಆದಾಯ ಮಿತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯೂಎಸ್‌)ಕ್ಕೆ ನೀಡಲಾದ ಮೀಸಲಾತಿ ಮೊದಲಿನಂತೆಯೇ ಇರಲಿದೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್‌ನಲ್ಲಿ ತಿಳಿಸಿರುವುದಾಗಿ 'ಇಂಡಿಯಾ ಟುಡೇ' ವರದಿ ಮಾಡಿದೆ.

ಇಡಬ್ಲ್ಯೂಎಸ್‌ ಮಾನದಂಡದ ಅರ್ಹತೆಯನ್ನು ನಿರ್ಧರಿಸಲು ನೇಮಿಸಲಾಗಿರುವ ಮೂವರು ಸದಸ್ಯರುಳ್ಳ ಸಮಿತಿಯ ಶಿಫಾರಸನ್ನು ಸ್ವೀಕರಿಸುವುದಾಗಿ ಅಫಿಡವಿಟ್‌ನಲ್ಲಿ ಕೇಂದ್ರ ತಿಳಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ನೀಟ್‌ ಪಿಜಿ ಕೌನ್ಸಿಲಿಂಗ್‌ ಪ್ರಕ್ರಿಯೆ ವಿಳಂಬವಾಗಿದ್ದನ್ನು ವಿರೋಧಿಸಿ ಕಳೆದ ತಿಂಗಳು ರಾಷ್ಟ್ರದಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದರು.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ‘ನೀಟ್‌’ ಮೂಲಕ ಪ್ರವೇಶ ಕಲ್ಪಿಸುವ ಸೀಟುಗಳಿಗೆ ಇತರೆ ಹಿಂದುಳಿದ ವರ್ಗಗಳಿಗೆ ಶೇ 27, ಇಡಬ್ಲ್ಯೂಎಸ್‌ಗೆ ಶೇ 10ರಷ್ಟು ಮೀಸಲಾತಿಯನ್ನು ನೀಡುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್‌ ಕೌನ್ಸೆಲಿಂಗ್‌ ಪ್ರಕ್ರಿಯೆಗೆ ತಡೆ ನೀಡಿತ್ತು. ₹8 ಲಕ್ಷ ವಾರ್ಷಿಕ ಆದಾಯ ಮಿತಿಯನ್ನು ಹೇಗೆ ನಿರ್ಧರಿಸಿದ್ದೀರಿ? ಎಂದು ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.