ADVERTISEMENT

ನೀಟ್‌–ಪಿಜಿ ಕೌನ್ಸೆಲಿಂಗ್‌ ವಿಳಂಬ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಐಎಂಎ ಆಗ್ರಹ

ಪಿಟಿಐ
Published 23 ಡಿಸೆಂಬರ್ 2021, 19:33 IST
Last Updated 23 ಡಿಸೆಂಬರ್ 2021, 19:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಕೌನ್ಸೆಲಿಂಗ್‌ (ನೀಟ್‌–ಪಿಜಿ ಕೌನ್ಸೆಲಿಂಗ್) ವಿಳಂಬವಾಗುತ್ತಿರುವುದನ್ನು ಖಂಡಿಸಿ ಸ್ಥಾನಿಕ ವೈದ್ಯರು ಮುಷ್ಕರ ನಡೆಸುತ್ತಿರುವ ಬಗ್ಗೆ ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಗುರುವಾರ ಕಳವಳ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಕೂಡಲೇ ಮಧ್ಯಪ್ರವೇಶಿಸುವಂತೆಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದೆ.

ಕೋವಿಡ್‌ ಪಿಡುಗಿನ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಆರೋಗ್ಯ ಸೇವೆಗಾಗಿ ಮಾನವ ಸಂಪನ್ಮೂಲವನ್ನು ಹೆಚ್ಚಿಸುವ ಅಗತ್ಯ ಇದೆ. ಹೀಗಾಗಿ ಸ್ಥಾನಿಕ ವೈದ್ಯರು ಆರಂಭಿಸಿರುವ ಮುಷ್ಕರದಿಂದ ಉದ್ಭವಿಸಿರುವ ಬಿಕ್ಕಟ್ಟನ್ನು ಕೂಡಲೇ ಬಗೆಹರಿಸಬೇಕು ಎಂದು ಐಎಂಎ ಪ್ರಕಟಣೆಯಲ್ಲಿ ಹೇಳಿದೆ.

‘ಈ ಬಿಕ್ಕಟ್ಟನ್ನು ತ್ವರಿತವಾಗಿ ಬಗೆಹರಿಸದಿದ್ದಲ್ಲಿ, ಸ್ಥಾನಿಕ ವೈದ್ಯರ ಮುಷ್ಕರದಲ್ಲಿ ಸಂಘಟನೆಯೂ ಭಾಗಿಯಾಗುವುದು ಅನಿವಾರ್ಯವಾಗುವುದು’ ಎಂದೂ ಐಎಂಎ ಎಚ್ಚರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.