
ಸುಪ್ರೀಂ ಕೋರ್ಟ್
ನವದೆಹಲಿ: 2025–26ನೇ ವರ್ಷದ ನೀಟ್–ಪಿಜಿಯ ಅರ್ಹತೆಗೆ ಸಂಬಂಧಿಸಿದ ಕಟ್ಆಫ್ ಪರ್ಸಂಟೈಲ್‌ಗಳನ್ನು ಗಣನೀಯವಾಗಿ ಕಡಿತಗೊಳಿಸುವ ನಿರ್ಧಾರದ ಕುರಿತು ವಿವರಣೆ ನೀಡುವಂತೆ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ(ಎನ್‌ಬಿಇಎಂಎಸ್) ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಹಾಗೂ ಅಲೋಕ್ ಆರಾಧೆ ಅವರು ಇದ್ದ ನ್ಯಾಯಪೀಠ, ಈ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಮಂಡಳಿಗೆ ನಿರ್ದೇಶನ ನೀಡಿ, ಎರಡು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿತು.
ಫೆಬ್ರುವರಿ 4ರಂದು ಈ ವಿಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ್ದ ಪೀಠವು, ಕೇಂದ್ರ ಸರ್ಕಾರ, ಎನ್‌ಬಿಇಎಂಎಸ್ ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ನೋಟಿಸ್ ನೀಡಿತ್ತು.
ದೇಶದಾದ್ಯಂತ 18 ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸ್ನಾತಕೋತ್ತರ ಸೀಟುಗಳು ಭರ್ತಿಯಾಗದೇ ಉಳಿದಿರುವ ಕಾರಣ, ಮಂಡಳಿಯು ನೀಟ್–ಪಿಜಿ ಅರ್ಹತೆಗೆ ಸಂಬಂಧಿಸಿದ ಕಟ್ಆಫ್ ಪರ್ಸಂಟೈಲ್‌ಗಳನ್ನು ಕಡಿತ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.