ADVERTISEMENT

ಮಾರ್ಚ್‌ 12ಕ್ಕೆ ನಿಗದಿಯಾಗಿದ್ದ ನೀಟ್‌–ಪಿಜಿ ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2022, 5:26 IST
Last Updated 4 ಫೆಬ್ರುವರಿ 2022, 5:26 IST
ಸೆ.12ರಂದು ನಡೆದಿದ್ದ ನೀಟ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು
ಸೆ.12ರಂದು ನಡೆದಿದ್ದ ನೀಟ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು    

ನವದೆಹಲಿ: ಮಾರ್ಚ್‌ 12ಕ್ಕೆ ನಿಗದಿಯಾಗಿದ್ದ 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌)–ಪಿಜಿ ಪರೀಕ್ಷೆಗಳನ್ನು ಕೇಂದ್ರ ಆರೋಗ್ಯ ಇಲಾಖೆ ಮುಂದೂಡಿದೆ.

6–8 ವಾರಗಳಿಗೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಶುಕ್ರವಾರ ವರದಿ ಮಾಡಿದೆ.

ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಿಗೇ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.

ಇಂದು (ಫೆ. 4) ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.