ADVERTISEMENT

ನೀಟ್–ಪಿಜಿ ಪರೀಕ್ಷೆ 4 ತಿಂಗಳು ಮುಂದೂಡಿಕೆ; ಕೋವಿಡ್ ಕರ್ತವ್ಯಕ್ಕೆ ವೈದ್ಯರು

ಏಜೆನ್ಸೀಸ್
Published 3 ಮೇ 2021, 10:37 IST
Last Updated 3 ಮೇ 2021, 10:37 IST
ಕೋವಿಡ್‌ ಆರೈಕೆ ಕೇಂದ್ರವೊಂದರಲ್ಲಿ ರೋಗಿಗಳ ಆರೋಗ್ಯ ತಪಾಸಣೆ ಮಾಡುತ್ತಿರುವ ವೈದ್ಯರು–ಸಾಂದರ್ಭಿಕ ಚಿತ್ರ
ಕೋವಿಡ್‌ ಆರೈಕೆ ಕೇಂದ್ರವೊಂದರಲ್ಲಿ ರೋಗಿಗಳ ಆರೋಗ್ಯ ತಪಾಸಣೆ ಮಾಡುತ್ತಿರುವ ವೈದ್ಯರು–ಸಾಂದರ್ಭಿಕ ಚಿತ್ರ   

ನವದೆಹಲಿ: ನೀಟ್‌–ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳು ಮುಂದೂಡುವುದಾಗಿ ಸೋಮವಾರ ಕೇಂದ್ರ ಸರ್ಕಾರ ಪ್ರಕಟಿಸಿದೆ. ದೇಶದಲ್ಲಿ ಕೋವಿಡ್‌–19 ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗದಂತೆ ತಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ವೈದ್ಯಕೀಯ ಸ್ನಾತಕೋತ್ತರ ಪದವಿ ಪ್ರವೇಶ ಆಯ್ಕೆಗಳನ್ನು ನೀಟ್‌–ಪಿಜಿ ಪರೀಕ್ಷೆಯ ಮೂಲಕ ನಡೆಸಲಾಗುತ್ತದೆ.

'ನೀಟ್‌–ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳು ಮುಂದೂಡಲು ನಿರ್ಧರಿಸಲಾಗಿದೆ, 2021ರ ಆಗಸ್ಟ್‌ 31ಕ್ಕೂ ಮುನ್ನ ಪರೀಕ್ಷೆ ನಡೆಸುವುದಿಲ್ಲ. ಪರೀಕ್ಷೆ ನಡೆಯುವುದಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಸಿದ್ಧತೆ ನಡೆಸಲು ಕನಿಷ್ಠ 1 ತಿಂಗಳ ಅವಕಾಶ ನೀಡಲಾಗುತ್ತದೆ. ಇದರಿಂದಾಗಿ ಕೋವಿಡ್‌ ಸಂಬಂಧಿತ ಕರ್ತವ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ವೈದ್ಯರ ಲಭ್ಯತೆ ಇರಲಿದೆ' ಎಂದು ಸರ್ಕಾರ ಪ್ರಕಟಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.