ADVERTISEMENT

10 ದಿನಗಳಲ್ಲೇ ‘ನೀಟ್–ಪಿಜಿ’ ಫಲಿತಾಂಶ ಪ್ರಕಟ

ಪಿಟಿಐ
Published 1 ಜೂನ್ 2022, 16:03 IST
Last Updated 1 ಜೂನ್ 2022, 16:03 IST
ಮನ್ಸುಖ್ ಮಾಂಡವಿಯಾ
ಮನ್ಸುಖ್ ಮಾಂಡವಿಯಾ   

ನವದೆಹಲಿ: ‘ನೀಟ್–ಪಿಜಿ 2022’ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ 10 ದಿನಗಳಲ್ಲೇ ಫಲಿತಾಂಶ ಪ್ರಕಟಿಸಿದ್ದಕ್ಕಾಗಿ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ (ಎನ್‌ಬಿಇಎಂಸ್‌) ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಮೆಚ್ಚುಗೆ ಸೂಚಿಸಿದ್ದಾರೆ.

‘ನೀಟ್–ಪಿಜಿ ಫಲಿತಾಂಶ ಹೊರಬಿದ್ದಿದೆ! ತೇರ್ಗಡೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆ. ಎನ್‌ಬಿಇಎಂಸ್‌ನ ಶ್ಲಾಘನೀಯ ಕೆಲಸಕ್ಕಾಗಿ ಅವರನ್ನು ನಾನು ಶ್ಲಾಘಿಸುತ್ತೇನೆ’ ಎಂದು ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ಪರೀಕ್ಷೆಯು ಮೇ 21ರಂದು 849 ಕೇಂದ್ರಗಳಲ್ಲಿ ನಡೆದಿತ್ತು. ಒಟ್ಟು 1,82,318 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.