ADVERTISEMENT

ನೀಟ್ ಪರೀಕ್ಷೆ: ದೇಶದಾದ್ಯಂತ ಶೇ 95ರಷ್ಟು ಹಾಜರಾತಿ

ಪಿಟಿಐ
Published 17 ಜುಲೈ 2022, 18:17 IST
Last Updated 17 ಜುಲೈ 2022, 18:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಭಾನುವಾರ ನಡೆದ, ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ‘ನೀಟ್‌’ಗೆ ಶೇ 95ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿದೆ.

‘ಪರೀಕ್ಷೆಗಾಗಿ 18,72,329 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಮಹಿಳಾ ಅಭ್ಯರ್ಥಿಗಳ ಸಂಖ್ಯೆ 10.64 ಲಕ್ಷ ಇತ್ತು. ಇದೇ ಮೊದಲ ಬಾರಿಗೆ ನೀಟ್‌ಗಾಗಿ ನೋಂದಣಿ ಮಾಡಿಸಿದ ಅಭ್ಯರ್ಥಿಗಳ ಸಂಖ್ಯೆ 18 ಲಕ್ಷದ ಗಡಿ ದಾಟಿತ್ತು’ ಎಂದು ಎನ್‌ಟಿಎ ಅಧಿಕಾರಿಗಳು ಹೇಳಿದ್ದಾರೆ.

ಜೈಪುರದಲ್ಲಿ ನಡೆದ ಪರೀಕ್ಷೆಯಲ್ಲಿ ಗರಿಷ್ಠ (52,351) ಸಂಖ್ಯೆಯ ಅಭ್ಯರ್ಥಿಗಳು ಹಾಜರಾಗಿದ್ದರು. ಸಿಕ್ಕಿಂನಲ್ಲಿ ಕನಿಷ್ಠ, 105 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದೂ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.