
ಲೈಂಗಿಕ ದೌರ್ಜನ್ಯ –ಪ್ರಾತಿನಿಧಿಕ ಚಿತ್ರ
ಪಟ್ನಾ: ನೀಟ್‌ಗೆ ತಯಾರಿ ನಡೆಸುತ್ತಿದ್ದ ಯುವತಿಯೊಬ್ಬರು ಮೃತಪಟ್ಟಿದ್ದ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಮೃತ ಯುವತಿಯ ಬಟ್ಟೆಯಲ್ಲಿ ವೀರ್ಯದ ಕಲೆಗಳು ಪತ್ತೆಯಾಗಿವೆ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ತಿಳಿಸಿದ್ದು, ಯುವತಿ ಮೇಲೆ ಲೈಂಗಿಕ ದೌರ್ಜ್ಯನ್ಯ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಪತ್ತೆಯಾಗಿರುವ ವೀರ್ಯಕ್ಕೆ ಸಂಬಂಧಿಸಿದ ಡಿಎನ್‌ಎ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ. ಅದನ್ನು ಆರೋಪಿಗಳ ಡಿಎನ್‌ಎಯೊಂದಿಗೆ ತಾಳೆಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಪ್ರವೇಶ ಪರೀಕ್ಷೆ(ನೀಟ್)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ಯುವತಿ ಪಟ್ನಾದ ಶಂಭು ಬಾಲಕಿಯರ ವಸತಿನಿಲಯದ ಕೋಣೆಯೊಂದರಲ್ಲಿ ಪ್ರಜ್ಞಾಹೀನರಾಗಿ ಪತ್ತೆಯಾಗಿದ್ದರು. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅವರು ಜನವರಿ 11ರಂದು ಮೃತಪಟ್ಟಿದ್ದರು. ಈ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ.
ಮೃತ ಯುವತಿಯ ಗುಪ್ತಾಂಗದಲ್ಲಿ ಗಾಯಗಳು ಮತ್ತು ಮೈಮೇಲೆ ಪರಚಿದ ಗಾಯಗಳಿದ್ದವು ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿತ್ತು.
ಘಟನೆಗೆ ಸಂಬಂಧಿಸಿ ಕರ್ತವ್ಯಲೋಪ ಎಸಗಿದ ಆರೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.