ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಕೋಟ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಆಕ್ಷಾಂಕಿಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ತರಬೇತಿ ಕೇಂದ್ರವಿರುವ ಕೋಟದಲ್ಲಿ ನಡೆದಿದೆ.
ಇಂದು (ಭಾನುವಾರ) ನಡೆಯುವ ಪರೀಕ್ಷೆಗೆ ವಿದ್ಯಾರ್ಥಿನಿ ಹಾಜರಾಗಬೇಕಿತ್ತು, ಆದರೆ ಶನಿವಾರ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತ ವಿದ್ಯಾರ್ಥಿನಿಯ ಹೆಸರನ್ನು ಬಹಿರಂಗಗೊಳಿಸಲು ಪೊಲೀಸರು ನಿರಾಕರಿಸಿದರು.
ಕೋಟದಲ್ಲಿ ತಂದೆ ತಾಯಿಯೊಂದಿಗೆ ವಿದ್ಯಾರ್ಥಿನಿ ವಾಸವಿದ್ದಳು. ಶನಿವಾರ ಸಂಜೆ ವಿದ್ಯಾರ್ಥಿನಿ ಸ್ಕಾರ್ಫ್ ಬಳಸಿ ತನ್ನ ಕೋಣೆಯಲ್ಲಿ ಕಬ್ಬಿಣದ ಸರಳಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆ ನಡೆದ ಸಮಯದಲ್ಲಿ ಕುಟುಂಬ ಸದಸ್ಯರು ಮನೆಯಲ್ಲಿದ್ದರು, ರಾತ್ರಿ 9 ಗಂಟೆ ಸುಮಾರಿಗೆ ಆಕೆ ಮೃತಪಟ್ಟಿರುವುದು ಗೊತ್ತಾಗಿದೆ. ಆಕೆಯ ಕೋಣೆಯಲ್ಲಿ ಯಾವುದೇ ರೀತಿ ಪತ್ರ ಪತ್ತೆಯಾಗಿಲ್ಲ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಟದಲ್ಲಿ ಈ ವರ್ಷ ಜನವರಿಯಿಂದ ಈವರೆಗೆ 14 ಜನ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.