ನವದೆಹಲಿ: ‘ನೀಟ್–ಯುಜಿ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಪಂಕಜ್ ಕುಮಾರ್ ಹಾಗೂ ರಾಜು ಸಿಂಗ್ ಬಂಧಿತರು. ಬೊಕಾರೊ ನಿವಾಸಿಯಾದ ಪಂಕಜ್ ಕುಮಾರ್ ಅವರನ್ನು ಪಟ್ನಾದಲ್ಲಿ ಹಾಗೂ ರಾಜು ಸಿಂಗ್ ಅವರನ್ನು ಹಜಾರಿಬಾಗ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದರೊಂದಿಗೆ ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ 14ಕ್ಕೆ ಏರಿದಂತಾಗಿದೆ.
ಪಂಕಜ್ ಕುಮಾರ್ ಸಿಂಗ್, ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಕಚೇರಿಯಲ್ಲಿನ ಪೆಟ್ಟಿಗೆಯಿಂದ ಪ್ರಶ್ನೆಪತ್ರಿಕೆ ಕಳವು ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಪ್ರಶ್ನೆಪತ್ರಿಕೆ ಕಳವು ಮಾಡಲು ಹಾಗೂ ಅವುಗಳನ್ನು ಇತರ ಗುಂಪಿಗೆ ಸಾಗಿಸುವಲ್ಲಿ ಪಂಕಜ್‌ಕಮಾರ್‌ಗೆ ರಾಜು ಸಿಂಗ್ ನೆರವಾಗುತ್ತಿದ್ದ ಎನ್ನಲಾಗಿದೆ.
ಪಂಕಜ್‌ಕುಮಾರ್, 2017ರಲ್ಲಿ ಜೆಮ್‌ಶೆಡ್‌ಪುರದ ನ್ಯಾಷನಲ್ ಇನ್‌ಸ್ಟಿಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.