ADVERTISEMENT

ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: 3ನೇ ರ್‍ಯಾಂಕ್‌ ಗಳಿಸಿದ ಕರ್ನಾಟಕದ ಹೃಷಿಕೇಶ್

3ನೇ ರ್‍ಯಾಂಕ್‌ ಗಳಿಸಿದ ಕರ್ನಾಟಕದ ಹೃಷಿಕೇಶ್ ನಾಗಭೂಷಣ ಗಂಗೂಲೆ

ಪಿಟಿಐ
Published 7 ಸೆಪ್ಟೆಂಬರ್ 2022, 19:51 IST
Last Updated 7 ಸೆಪ್ಟೆಂಬರ್ 2022, 19:51 IST
   

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಫಲಿತಾಂಶ ಬುಧವಾರ ರಾತ್ರಿ ಪ್ರಕಟವಾಗಿದ್ದು, ಒಟ್ಟು 9.93 ಲಕ್ಷ ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.

ಪ್ರವೇಶ ಪರೀಕ್ಷೆಯಲ್ಲಿ ರಾಜಸ್ಥಾನದ ತನಿಷ್ಕಾ ಮೊದಲ ರ್‍ಯಾಂಕ್‌ ಗಳಿಸಿದ್ದಾರೆ. ದೆಹಲಿಯ ವತ್ಸ ಆಶಿಶ್ ಬಾತ್ರಾ ಮತ್ತು ಕರ್ನಾಟಕದ ಹೃಷಿಕೇಶ್ ನಾಗಭೂಷಣ ಗಂಗೂಲೆ ಕ್ರಮವಾಗಿ ಎರಡು ಮತ್ತು ಮೂರನೇ ರ್‍ಯಾಂಕ್‌ ಪಡೆದಿದ್ದಾರೆ.

ಉತ್ತರ ಪ್ರದೇಶದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ(1.17 ಲಕ್ಷ) ಉತ್ತೀರ್ಣರಾಗಿದ್ದಾರೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ(1.13 ಲಕ್ಷ) ಹಾಗೂರಾಜಸ್ಥಾನದ (82,548) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ADVERTISEMENT

ದೇಶದಾದ್ಯಂತ 497 ನಗರಗಳ3,570 ಕೇಂದ್ರಗಳಲ್ಲಿ ಹಾಗೂ ವಿದೇಶದ 14 ನಗರಗಳಲ್ಲಿ ಜುಲೈ 17ರಂದು ಪ್ರವೇಶ ಪರೀಕ್ಷೆ ನಡೆದಿತ್ತು. ಶೇ 95ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಪರೀಕ್ಷೆಯನ್ನು ಒಟ್ಟು 13 ಭಾಷೆಗಳಲ್ಲಿ, ಅಂದರೆ ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಈ ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಮೊದಲ ಬಾರಿಗೆ ಅಬುಧಾಬಿ, ಬ್ಯಾಂಕಾಕ್, ಕೊಲಂಬೊ, ದೋಹಾ, ಕಠ್ಮಂಡು, ಕೌಲಾಲಂಪುರ, ಲಾಗೋಸ್, ಮನಾಮಾ, ಮಸ್ಕತ್, ರಿಯಾದ್, ಶಾರ್ಜಾ, ಸಿಂಗಾಪುರ್, ದುಬೈ ಮತ್ತು ಕುವೈತ್ ನಗರಗಳಲ್ಲಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು.

ಒಟ್ಟು 17.64 ಲಕ್ಷ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.