ADVERTISEMENT

ಎನ್‌ಇಪಿ: 2 ಲಕ್ಷಕ್ಕೂ ಹೆಚ್ಚು ಸಲಹೆಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 20:15 IST
Last Updated 21 ನವೆಂಬರ್ 2019, 20:15 IST
   

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಅಂತಿಮ ಕರಡು ಕುರಿತು 2 ಲಕ್ಷಕ್ಕೂ ಹೆಚ್ಚು ಸಲಹೆಗಳು ಬಂದಿದ್ದು, ಇವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖರಿಯಾಲ್ ‘ನಿಶಂಕ್’ ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದರು.

ಪ್ರಶ್ನೋತ್ತರ ಅವಧಿ ವೇಳೆ ವಿಷಯ ಪ್ರಸ್ತಾಪಿಸಿದ ‘ನಿಶಂಕ್’ ಅವರು, ವಿವಿಧ ರಾಜ್ಯಗಳ ಕಾರ್ಯದರ್ಶಿಗಳು, ತಜ್ಞರ ಜತೆಗೆ ಶಿಕ್ಷಣ ಸಚಿವರು, ಸಂಸದರ ಜತೆ ಸಹ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.

1968 ಹಾಗೂ 1986ರ ನಿಯಮಾವಳಿಗಳ ಅನುಸಾರ ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿಯೇ ಕಲಿಸಲಾಗುತ್ತದೆ ಎಂದು ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.