ADVERTISEMENT

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ: 23ಕ್ಕೆ ಹೋಲೋಗ್ರಾಂ ಅನಾವರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2022, 8:50 IST
Last Updated 21 ಜನವರಿ 2022, 8:50 IST
ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಹಂಚಿಕೊಂಡ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆ
ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಹಂಚಿಕೊಂಡ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆ   

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಇಂಡಿಯಾ‌ ಗೇಟ್‌ನಲ್ಲಿ‌ ಗ್ರಾನೈಟ್‌ನಿಂದ ಮಾಡಿದ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'ರಾಷ್ಟ್ರದೆಲ್ಲೆಡೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಗ್ರಾನೈಟ್‌ನಿಂದ ನಿರ್ಮಿಸಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸುತ್ತಿರುವ ಬಗ್ಗೆ ತಿಳಿಸಲು ನನಗೆ ಸಂತೋಷವಾಗುತ್ತಿದೆ. ಇದು ನೇತಾಜಿ ಅವರಿಗೆ ಭಾರತ ಋಣಿಯಾಗಿರುವ ಸಂಕೇತವಾಗಿದೆ' ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

'ನೇತಾಜಿ ಅವರ ಜನ್ಮದಿನ ಜನವರಿ 23ರಂದು ಹೋಲೋಗ್ರಾಂ ಪ್ರತಿಮೆಯನ್ನು ಅನಾವರಣಗೊಳಿಸುತ್ತೇನೆ. ನೇತಾಜಿ ಅವರ ಭವ್ಯವಾದ ಪ್ರತಿಮೆ ಪೂರ್ಣಗೊಳ್ಳುವವರೆಗೆ ಅದೇ ಸ್ಥಳದಲ್ಲಿ ಹೋಲೋಗ್ರಾಂ ಪ್ರತಿಮೆ ಇರಲಿದೆ' ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.