ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ನೆದರ್ಲ್ಯಾಂಡ್ಸ್‌ನ ಪ್ರಧಾನಿಯಾಗಿ ರಾಬ್ ಜೆಟ್ಟನ್ ಅಧಿಕಾರ ವಹಿಸಿಕೊಂಡಿದ್ದಾರೆ. ಜೆಟ್ಟನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ರಾಬ್ ಜೆಟ್ಟನ್ ಅವರಿಗೆ ಅಭಿನಂದನೆಗಳು. ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಸಂಬಂಧವನ್ನು ಮತ್ತಷ್ಟು ವೃದ್ಧಿಗೊಳಿಸಲು ನಿಮ್ಮೊಂದಿಗೆ ( ರಾಬ್ ಜೆಟ್ಟನ್) ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಉಭಯ ರಾಷ್ಟ್ರಗಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ವ್ಯಾಪಾರ ಸಂಬಂಧ ಹೊಂದಿದೆ. ಎರಡೂ ದೇಶಗಳ ಹಾಗೂ ಜನರ ನಡುವೆ ಏರ್ಪಡುತ್ತಿರುವ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಬಯಸುವುದಾಗಿ ಪೋಸ್ಟ್‌ನಲ್ಲಿ ಮೋದಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.