ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1.73 ಲಕ್ಷ ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿದ್ದು, 3,617 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 45 ದಿನಗಳಲ್ಲಿ ಕಡಿಮೆ ಪ್ರಕರಣ ಶನಿವಾರ 24 ಗಂಟೆಗಳ ಅಂತರದಲ್ಲಿ ದಾಖಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,77,29,247ಕ್ಕೆ ಏರಿಕೆಯಾಗಿದೆ. ಆ ಪೈಕಿ 3,22,512 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 2,51,93,410 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 22,28,724 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಇದುವರೆಗೆ 20,89,02,445ಡೋಸ್ ಲಸಿಕೆಯನ್ನು ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.