ADVERTISEMENT

ಅಮೆರಿಕ ಪ್ರಜಾಪ್ರಭುತ್ವದಲ್ಲಿ ಹೊಸ ಅಧ್ಯಾಯ: ರಾಹುಲ್ ಗಾಂಧಿ

ಪಿಟಿಐ
Published 21 ಜನವರಿ 2021, 3:40 IST
Last Updated 21 ಜನವರಿ 2021, 3:40 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಜೋ ಬೈಡನ್ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಅಮೆರಿಕ ಪ್ರಜಾಪ್ರಭುತ್ವದಲ್ಲಿ ಹೊಸ ಅಧ್ಯಾಯದ ಆರಂಭವಾಗಿದೆ ಎಂದು ತಿಳಿಸಿದರು.

ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿ ಪದಗ್ರಹಣ ಮಾಡಿರುವ ಕಮಲಾ ಹ್ಯಾರಿಸ್ ಅವರಿಗೂ ರಾಹುಲ್ ಗಾಂಧಿ ಶುಭಾಶಗಳನ್ನು ಕೋರಿದರು.

ADVERTISEMENT

ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅಧಿಕಾರ ವಹಿಸಿದರು. ಅಧಿಕಾರ ವಹಿಸಿದ ಮೊದಲ ದಿನದಲ್ಲೇ ಹಲವು ಎಕ್ಸಿಕ್ಯೂಟಿವ್ ಆದೇಶಗಳಿಗೆ ಸಹಿ ಹಾಕಿದ್ದಾರೆ.

ಅಮೆರಿಕದ ಉಪಾಧ್ಯಕ್ಷೆ ಸ್ಥಾನ ವಹಿಸುತ್ತಿರುವ ದಕ್ಷಿಣ ಏಷ್ಯಾದ ಮೊದಲ ಮಹಿಳಾ ಉಪಾಧ್ಯಕ್ಷೆ ಹಾಗೂ ಮೊದಲ ಕಪ್ಪುವರ್ಣೀಯ ಎಂಬ ಹಿರಿಮೆಗೂ ಕಮಲಾ ಹ್ಯಾರಿಸ್ ಪಾತ್ರವಾಗಿದ್ದಾರೆ.

ಈ ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದು, ಭಾರತ-ಅಮೆರಿಕ ವ್ಯೂಹಾತ್ಮಕ ಸಹಭಾಗಿತ್ವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಜೋ ಬೈಡನ್ ಅವರೊಂದಿಗೆ ಕೈಜೋಡಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.