ADVERTISEMENT

ದೇಶದಲ್ಲಿ ಒಂದೇ ದಿನ 773 ಹೊಸ ಪ್ರಕರಣ, ಸತ್ತವರ ಒಟ್ಟು ಸಂಖ್ಯೆ 124

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 6:46 IST
Last Updated 8 ಏಪ್ರಿಲ್ 2020, 6:46 IST
   

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದ ವಿವಿಧೆಡೆ ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಈವರೆಗೆ ದೇಶದಲ್ಲಿ ಒಟ್ಟು 5194 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ773 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 35 ಮಂದಿ ಮೃತಪಟ್ಟಿದ್ದಾರೆ.ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 149 ದಾಟಿದೆ.

ವಿಶ್ವದ ವಿವಿಧೆಡೆ ಕೋವಿಡ್-19 ಬಾಧಿತರ ಸಂಖ್ಯೆ 15 ಲಕ್ಷ, ಮೃತರ ಸಂಖ್ಯೆ 80 ಸಾವಿರದಾಟಿದೆ. ಕೊರೊನಾ ವೈರಸ್ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡ ಚೀನಾದ ವುಹಾನ್‌ನಲ್ಲಿ ಬದುಕು ಸಹಜ ಸ್ಥಿತಿಗೆ ಮರಳುತ್ತಿದೆ. ಹುಬೇ ಪ್ರಾಂತ್ಯದಲ್ಲಿ ಕಳೆದ 11 ವಾರಗಳಿಂದ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

'ದೇಶವನ್ನು ಉಳಿಸಲು ಲಾಕ್‌ಡೌನ್ ಮುಂದುವರಿಸುವುದು ಅನಿವಾರ್ಯವಾಗುತ್ತೆ. ಆರ್ಥಿಕತೆಗಿಂತಲೂ ಜನರ ಜೀವ ಉಳಿಸುವುದು ನಮ್ಮ ಅದ್ಯತೆ' ಎಂದುತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅಭಿಪ್ರಾಯಪಟ್ಟಿದ್ದಾರೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳೂ ಇದೇ ನಿಲುವು ತಳೆಯುತ್ತಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ದೇಶದಲ್ಲಿ ಮೂರು ವಾರಗಳ ಲಾಕ್‌ಡೌನ್ ಘೋ‍ಷಿಸಿದ್ದರು. ಲಾಕ್‌ಡೌನ್ ಅವಧಿ ಏಪ್ರಿಲ್ 14ಕ್ಕೆ ಮುಕ್ತಾಯವಾಗಲಿದೆ. ಆದರೆ ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಲಾಕ್‌ಡೌನ್ ವಿಸ್ತರಿಸಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯವನ್ನು ಪರಿಗಣಿಸಿಯೇ ಕೇಂದ್ರ ಸರ್ಕಾರದ ದೇಶದ ಹಿತದ ದೃಷ್ಟಿಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.