ADVERTISEMENT

ಭಾರತೀಯ ಭಾಷೆಯ ಅಭಿವೃದ್ಧಿ, ಸಬಲೀಕರಣಕ್ಕೆ ಸರ್ಕಾರ ಬದ್ಧ: ಅಮಿತ್‌ ಶಾ

ಪಿಟಿಐ
Published 21 ಫೆಬ್ರುವರಿ 2021, 6:36 IST
Last Updated 21 ಫೆಬ್ರುವರಿ 2021, 6:36 IST
ಆಮಿತ್‌ ಶಾ
ಆಮಿತ್‌ ಶಾ   

ನವದೆಹಲಿ: ‘ಹೊಸ ಶಿಕ್ಷಣ ನೀತಿಯು ಭಾರತೀಯ ಭಾಷೆಗಳ ಸಂರಕ್ಷಣೆ, ಅಭಿವೃದ್ದಿ, ಸಬಲೀಕರಣಕ್ಕಾಗಿ ಮೋದಿ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ಹೇಳಿದರು.

ಅಂತರರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯ ಅಂಗವಾಗಿ ಟ್ವೀಟ್‌ ಮಾಡಿರುವ ಅವರು,‘ ಮಾತೃಭಾಷೆಯು ಅಭಿವ್ಯಕ್ತಿಯ ಪ್ರಬಲ ಮಾಧ್ಯಮವಾಗಿದೆ. ನಮ್ಮ ಹೊಸ ಶಿಕ್ಷಣ ನೀತಿಯು ಭಾರತೀಯ ಭಾಷೆಗಳ ಸಂರಕ್ಷಣೆ, ಅಭಿವೃದ್ದಿ, ಸಬಲೀಕರಣಕ್ಕಾಗಿ ಮೋದಿ ಸರ್ಕಾರದ ಬದ್ಧತೆಯನ್ನು ಹೇಳುತ್ತದೆ’ ಎಂದರು.

‘ಮಾತೃ ಭಾಷೆಗೆ ಇನ್ನಷ್ಟು ಒತ್ತು ನೀಡಬೇಕು. ಪ್ರೋತ್ಸಾಹಿಸಬೇಕು. ದೇಶದ ಅಡಿಪಾಯವನ್ನು ಇನ್ನಷ್ಟು ಸದೃಢಗೊಳಿಸಲು ಮಾತೃಭಾಷೆ ಮತ್ತು ಅದರ ಜ್ಞಾನವನ್ನು ನಮ್ಮ ಮುಂದಿನ ಪೀಳಿಗೆಗೆ ನೀಡಬೇಕು’ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.