ADVERTISEMENT

ಉದ್ಯೋಗದಾತರ ಸೃಷ್ಟಿಯೇ ಎನ್‌ಇಪಿ ಆಶಯ: ಮೋದಿ

ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 20:44 IST
Last Updated 1 ಆಗಸ್ಟ್ 2020, 20:44 IST
ನರೇಂದ್ರ ಮೋದಿ 
ನರೇಂದ್ರ ಮೋದಿ    

ನವದೆಹಲಿ: ‘ಕೆಲಸ ಹುಡುಕುವವರ ಬದಲು ಕೆಲಸ ಕೊಡುವವರನ್ನು ಸೃಷ್ಟಿಸುವುದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಮೂಲ ಆಶಯ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದರು.

ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ನ ಫೈನಲ್‌ನಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು.

‘ಹೊಸ ಎನ್‌ಇಪಿಯು ಜನ ಮತ್ತು ಭವಿಷ್ಯ ಕೇಂದ್ರಿತವಾಗಿದೆ. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ವಿಷಯದಲ್ಲೇ ಆಳವಾದ ಅಧ್ಯಯನ ನಡೆಸಲು ಇದು ಸಹಕಾರಿಯಾಗಿದೆ. ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದಕ್ಕೆ ಒತ್ತು ನೀಡಿರುವುದರಿಂದ ಎಲ್ಲರಿಗೂ ಅನುಕೂಲವಾಗಲಿದೆ. ಹಿಂದಿನ ಐದು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳ ಪರಿಣತರ ಅಭಿಪ್ರಾಯಗಳನ್ನು ಸಂಗ್ರಹಿಸಿ ಇದನ್ನು ರೂಪಿಸಲಾಗಿದೆ’ ಎಂದೂ ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.