ADVERTISEMENT

ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಅನೂಪ್​ ಚಂದ್ರ ಪಾಂಡೆ ಅಧಿಕಾರ ಸ್ವೀಕಾರ

ಏಜೆನ್ಸೀಸ್
Published 9 ಜೂನ್ 2021, 11:55 IST
Last Updated 9 ಜೂನ್ 2021, 11:55 IST
ಅನೂಪ್​ ಚಂದ್ರ ಪಾಂಡೆ -ಪಿಟಿಐ ಚಿತ್ರ
ಅನೂಪ್​ ಚಂದ್ರ ಪಾಂಡೆ -ಪಿಟಿಐ ಚಿತ್ರ   

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು.

ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ಸುನಿಲ್ ಅರೋರಾ ಏಪ್ರಿಲ್‌ನಲ್ಲಿ ನಿವೃತ್ತರಾಗಿದ್ದರು. ಬಳಿಕ ಆ ಹುದ್ದೆ ತೆರವಾಗಿತ್ತು.

1984ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅನೂಪ್ ಚಂದ್ರ ಪಾಂಡೆ ಅವರನ್ನು ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ನೇಮಕ ಮಾಡುತ್ತಿರುವ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ADVERTISEMENT

2017ರ ಸೆಪ್ಟೆಂಬರ್‌ನಿಂದ 2019ರ ಆಗಸ್ಟ್‌ವರೆಗೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಅನೂಪ್ ಚಂದ್ರ ಅವರು ಈ ಹಿಂದೆ ಉತ್ತರ ಪ್ರದೇಶದ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ನಾಲ್ಕು ವರ್ಷ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.