ADVERTISEMENT

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ಪುದುಚೇರಿಯಲ್ಲಿ ಭಾರಿ ಮಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಡಿಸೆಂಬರ್ 2024, 5:05 IST
Last Updated 11 ಡಿಸೆಂಬರ್ 2024, 5:05 IST
<div class="paragraphs"><p>ಪಿಟಿಐ ಚಿತ್ರ</p></div>
   

ಪಿಟಿಐ ಚಿತ್ರ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು ಪುದುಚೇರಿಯ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಮುಂದಿನ ನಾಲ್ಕೈದು ದಿನ ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರಬೇಕು ಎಂದು ಚೆನ್ನೈ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜತೆಗೆ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೊಷಿಸಿದೆ.

ADVERTISEMENT

ಕರ್ನಾಟಕದ ಮೇಲೂ ಪರಿಣಾಮ

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕಕ್ಕೂ ತಟ್ಟಲಿದ್ದು, ಗುರುವಾರ ಮತ್ತು ಶುಕ್ರವಾರ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.