ಲಖನೌ (ಪಿಟಿಐ): ಪಕ್ಷದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಎಸ್‌ಪಿ ಮುಖಂಡ ಶಿವಪಾಲ್ ಯಾದವ್ ‘ಸಮಾಜವಾದಿ ಜಾತ್ಯತೀತ ಮೋರ್ಚಾ’ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ.
‘ಸಮಾಜವಾದಿ ಪಕ್ಷದಲ್ಲಿ ನನ್ನನ್ನು ನಿರ್ಲಕ್ಷಿಸಲಾಗಿತ್ತು. ನನಗೆ ಪಕ್ಷದ ಸಭೆಗಳಿಗೆ ಕರೆಯಲಿಲ್ಲ. ಯಾವುದೇ ಜವಾಬ್ದಾರಿಯನ್ನೂ ನೀಡಲಿಲ್ಲ. ಹೀಗಾಗಿ ಹೊಸ ಪಕ್ಷ ಸ್ಥಾಪಿಸಿದೆ’ ಎಂದು ಶಿವಪಾಲ್ ಯಾದವ್ ಬುಧವಾರ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.