ADVERTISEMENT

New Delhi Railway Station: ನವಜಾತ ಶಿಶುವಿನ ಮೃತದೇಹ ಪತ್ತೆ

ಪಿಟಿಐ
Published 11 ಮಾರ್ಚ್ 2025, 4:19 IST
Last Updated 11 ಮಾರ್ಚ್ 2025, 4:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದ ರೈಲಿನ ಎರಡು ಬೋಗಿಗಳ ನಡುವೆ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗುವಿನ ದೇಹವು ರಕ್ತದಿಂದ ಆವೃತವಾಗಿತ್ತು. ಆದರೆ, ಬಾಹ್ಯವಾಗಿ ಯಾವುದೇ ಗಾಯಗಳಾಗಿರಲಿಲ್ಲ. ಹೆರಿಗೆಯ ಬಳಿಕ ನವಜಾತ ಶಿಶುವನ್ನು ಅಲ್ಲಿ ಎಸೆದು ಹೋಗಲಾಗಿದೆ ಎಂದು ಮೇಲ್ನೊಟಕ್ಕೆ ತೋರುತ್ತಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ವಿಷಯದ ಕುರಿತು ಮಾಹಿತಿ ತಿಳಿದ ತಕ್ಷಣ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಮತ್ತು ಪೊಲೀಸ್‌ ತಂಡ ಸ್ಥಳಕ್ಕೆ ಧಾವಿಸಿದ್ದು, ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಿದ್ದಾರೆ. ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದ ಬಳಿಯ ರಾಜಧಾನಿ ಕಾಂಪ್ಲೆಕ್ಸ್‌ನಲ್ಲಿ ನಿಂತಿದ್ದ ರೈಲಿನ ಎರಡು ಬೋಗಿಗಳ ನಡುವಿನ ಕಪ್ಲರ್‌ಗಳ (ರೈಲು ಬೋಗಿಗಳನ್ನು ಸಂಪರ್ಕಿಸುವ ಕಬ್ಬಿಣದ ಕೊಂಡಿ) ಮೇಲೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಾಕ್ಷಿಗಳನ್ನು ಅಪರಾಧ ತಂಡದ ಸಿಬ್ಬಂದಿ ಸಂಗ್ರಹಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.