ADVERTISEMENT

ಗುಜರಾತ್: ನವಜಾತ ಅವಳಿ ಶಿಶುಗಳಿಗೆ ಕೋವಿಡ್-19 ದೃಢ, ಆಸ್ಪತ್ರೆಗೆ ದಾಖಲು

ಏಜೆನ್ಸೀಸ್
Published 2 ಏಪ್ರಿಲ್ 2021, 3:03 IST
Last Updated 2 ಏಪ್ರಿಲ್ 2021, 3:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುಜರಾತ್: ವಡೋದರಾದಲ್ಲಿ ನವಜಾತ ಅವಳಿ ಶಿಶುಗಳಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸದ್ಯ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ವರದಿಯಾಗಿದೆ.

ತೀವ್ರವಾದ ಅತಿಸಾರ ಮತ್ತು ಡೀಹೈಡ್ರೇಶನ್‌ನಿಂದ ಬಳಲುತ್ತಿದ್ದ ಅವಳಿ ಮಕ್ಕಳನ್ನು ಜನಿಸಿದ 15 ದಿನಗಳ ಬಳಿಕ ಆಸ್ಪತ್ರೆಗೆ ಕರೆತರಲಾಯಿತು. ಬಳಿಕ ನಡೆಸಿದ ಪರೀಕ್ಷೆಯಲ್ಲಿ ಎರಡೂ ಮಕ್ಕಳಿಗೂ ಕೋವಿಡ್ ಸೋಂಕು ತಗುಲಿರುವುದು ದೃಢವಾಯಿತು. ಸದ್ಯ, ಶಿಶುಗಳ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಇನ್ನೂ ಡಿಸ್ಚಾರ್ಜ್ ಆಗಿಲ್ಲ' ಎಂದು ಎಸ್‌ಎಸ್‌ಜಿ ಆಸ್ಪತ್ರೆಯ ಪೀಡಿಯಾಟ್ರಿಕ್ಸ್ ವಿಭಾಗದ ಮುಖ್ಯಸ್ಥ ಡಾ. ಐಯ್ಯರ್ ತಿಳಿಸಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಗುರುವಾರ 72,330 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಐದು ತಿಂಗಳಲ್ಲೇ ಗರಿಷ್ಠ ಕೋವಿಡ್‌ ಪ್ರಕರಣಗಳಿಗೆ ದೇಶ ಸಾಕ್ಷಿಯಾಗಿತ್ತು. ಕಳೆದ 24 ಗಂಟೆಗಳಲ್ಲಿ 459 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 1,62,927ಕ್ಕೆ ತಲುಪಿತ್ತು.‌

ADVERTISEMENT

ಗುಜರಾತ್‌ನಲ್ಲಿ ಈವರೆಗೂ ಒಟ್ಟು 3,07,698 ಜನರಿಗೆ ಸೋಂಕು ತಗುಲಿದ್ದು, 12,610 ಸಕ್ರಿಯ ಪ್ರಕರಣಗಳು ಇವೆ. ಈವರೆಗೂ 2,90,569 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,519 ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.