ADVERTISEMENT

Covid 19: ಕಳೆದ 24 ಗಂಟೆಗಳಲ್ಲಿ 752 ಸಕ್ರಿಯ ಪ್ರಕರಣ; 4 ಸಾವು

ಪಿಟಿಐ
Published 23 ಡಿಸೆಂಬರ್ 2023, 5:14 IST
Last Updated 23 ಡಿಸೆಂಬರ್ 2023, 5:14 IST
ಕೊರೊನಾ ವೈರಸ್ ಪರೀಕ್ಷೆ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್ ಪರೀಕ್ಷೆ (ಸಾಂದರ್ಭಿಕ ಚಿತ್ರ)   

ನವದೆಹಲಿ: ಕೋವಿಡ್‌–19 ಸೋಂಕಿಗೆ ಸಂಬಂಧಿಸಿದಂತೆ ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 752 ಹೊಸ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ಕಳೆದ ಮೇ 21ರಿಂದ ಇಲ್ಲಿಯವರೆಗೆ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಸಂಖ್ಯೆ ಇದಾಗಿದೆ. 

ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 3,420 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಇವರಲ್ಲಿ ಕೇರಳದಲ್ಲಿ ಇಬ್ಬರು, ರಾಜಸ್ಥಾನ ಹಾಗೂ ಕರ್ನಾಟಕದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 

ADVERTISEMENT

ಕೋವಿಡ್‌–19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ದೇಶದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ಶೇ 98.81 ಇದೆ. ಮೃತರ ಪ್ರಮಾಣ ಶೇ 1.19ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂತರ್ಜಾಲ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಈವರೆಗೂ ದೇಶದಲ್ಲಿ 220.67 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.