ADVERTISEMENT

ಬಿಹಾರ: ಎನ್‌ಡಿಎ ಶಾಸಕರ ಸಭೆ ಭಾನುವಾರ

ಪಿಟಿಐ
Published 13 ನವೆಂಬರ್ 2020, 10:24 IST
Last Updated 13 ನವೆಂಬರ್ 2020, 10:24 IST
ನಿತೀಶ್‌ ಕುಮಾರ್‌
ನಿತೀಶ್‌ ಕುಮಾರ್‌   

ಪಟ್ನಾ: ಎನ್‌ಡಿಎ ಶಾಸಕಾಂಗ ಪಕ್ಷದ ಜಂಟಿ ಸಭೆಯು ಭಾನುವಾರ ನಡೆಯಲಿದ್ದು, ಈ ವೇಳೆ ನಾಯಕರು ನಿತೀಶ್‌ ಕುಮಾರ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆರಿಸಲಿದ್ದಾರೆ.

ಬಿಹಾರದ ಎನ್‌ಡಿಎ ಕೂಟದ ಪ್ರಮುಖ ಪಕ್ಷಗಳಾದ ಜೆಡಿಯು, ಬಿಜೆಪಿ, ಎಚ್‌ಎಎಮ್‌, ವಿಕಾಸ್‌ಶೀಲ್‌ ಇನ್ಸಾನ್‌ ಪಕ್ಷ(ವಿಐಪಿ) ಪಕ್ಷದ ನಾಯಕರು ಶುಕ್ರವಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನಿವಾಸದಲ್ಲಿಸಭೆ ನಡೆಸಿ ನಿತೀಶ್‌ ಕುಮಾರ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಬಗ್ಗೆ ನಿರ್ಧರಿಸಲಾಯಿತು.

ಭಾನುವಾರ ಮಧ್ಯಾಹ್ನ 12.30ಕ್ಕೆ ಸಭೆ ಆರಂಭವಾಗಲಿದೆ ಎಂದು ನಿತೀಶ್‌ ಕುಮಾರ್‌ ಅವರು ಮಾಧ್ಯಮದವರಿಗೆ ತಿಳಿಸಿದರು.

ADVERTISEMENT

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದಿದೆ. ಜೆಡಿಯುನಿಂದ 31 ಹೆಚ್ಚು ಸ್ಥಾನಗಳನ್ನು ಪಡೆದರೂ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರನ್ನು ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.