ADVERTISEMENT

ನವ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ: ಪತಿಯೇ ಪ್ರಮುಖ ಆರೋಪಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2018, 11:47 IST
Last Updated 29 ಸೆಪ್ಟೆಂಬರ್ 2018, 11:47 IST
   

ಕುರುಕ್ಷೇತ್ರ (ಹರಿಯಾಣ): ಇಲ್ಲಿನ ಬಬೇನ್‌ ಪ್ರದೇಶದಲ್ಲಿ ನವ ವಿವಾಹಿತೆಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕುರುಕ್ಷೇತ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರಕ್ಕೆ ಒಳಗಾಗಿರುವ ಮಹಿಳೆಯ ಪತಿಯೇ ಪ್ರಮುಖ ಆರೋಪಿ. ಸೆಪ್ಟೆಂಬರ್ 13 ಮತ್ತು 14 ರಂದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಗೆ ಸೆಪ್ಟೆಂಬರ್‌ 12ರಂದು ವಿವಾಹವಾಗಿತ್ತು. ಸೆಪ್ಟೆಂಬರ್ 13ರ ರಾತ್ರಿ ಜ್ಯೂಸ್‌ನಲ್ಲಿ ಮಂಪರು ಔಷಧಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ ಎಂದು ಯುವತಿಯ ಪೋಷಕರು ದೂರಿದ್ದಾರೆ.

ADVERTISEMENT

ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಇಲ್ಲಿಯವರೆಗೂ ಪೊಲೀಸರು ಯಾರನ್ನು ಬಂಧಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.