ADVERTISEMENT

ದೆಹಲಿ | ಫೆ. 20ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಬಿಜೆಪಿ

ಪಿಟಿಐ
Published 17 ಫೆಬ್ರುವರಿ 2025, 10:07 IST
Last Updated 17 ಫೆಬ್ರುವರಿ 2025, 10:07 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಫೆಬ್ರುವರಿ 20ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಫೆಬ್ರುವರಿ 20ರಂದು ಸಂಜೆ 4.30ರ ಸುಮಾರಿಗೆ ಪ್ರಮಾಣ ವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಇಂದು (ಸೋಮವಾರ) ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬುಧವಾರಕ್ಕೆ ಮುಂದೂಡಲಾಗಿದ್ದು, ಅಂದು ಪಕ್ಷವು ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ. ಪ್ರಮಾಣ ವಚನ ಸಮಾರಂಭದ ವಿವರಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆದಿತ್ತು. ಫೆ.8ರಂದು ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಎಎಪಿ 22 ಸ್ಥಾನಗಳನ್ನು ಗೆದ್ದು ದಶಕಗಳ ಆಡಳಿತವನ್ನು ಕೊನೆಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.