ADVERTISEMENT

ಸ್ವಪ್ನಾ ಸುರೇಶ್‌ ವಜಾಗೊಳಿಸಿದ ಎನ್‌ಜಿಒ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 13:36 IST
Last Updated 6 ಜುಲೈ 2022, 13:36 IST
ಸ್ವಪ್ನಾ ಸುರೇಶ್
ಸ್ವಪ್ನಾ ಸುರೇಶ್   

ಪಾಲಕ್ಕಾಡ್ (ಪಿಟಿಐ):ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಆರ್‌ಎಸ್‌ಎಸ್ ಸಂಪರ್ಕ ಹೊಂದಿರುವ ಸ್ವಯಂ ಸೇವಾ ಸಂಸ್ಥೆ ನೌಕರಿಯಿಂದ ವಜಾ ಮಾಡಲಾಗಿದೆ. ಅವರಿಗೆ ಉದ್ಯೋಗ ನೀಡಿರುವುದಕ್ಕೆ ಕೇರಳ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಸಂಸ್ಥೆ ಆರೋಪಿಸಿದೆ.

ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಎಚ್‌ಆರ್‌ಡಿಎಸ್‌, ಮಹಿಳಾ ಸಬಲೀಕರಣ ಮತ್ತು ಸಿಎಸ್‌ಆರ್‌ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿದ್ದರೂ ಮಹಿಳಾ ಸಬಲೀಕರಣ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ಉಳಿಸಿಕೊಳ್ಳಲಾಗುವುದು. ಇದು ಸಂಬಳವಿಲ್ಲದ ಹುದ್ದೆಯಾಗಿದೆ ಎಂದು ಹೇಳಿದೆ.

’ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳನ್ನು ಎನ್‌ಜಿಒ ರಕ್ಷಿಸುತ್ತಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸ್ವಪ್ನಾ ನೇಮಕಾತಿ ರದ್ದುಗೊಳಿಸಲು ನಿರ್ಧರಿಸಲಾಗಿದೆ‘ ಎಂದು ಸಂಸ್ಥೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.