ADVERTISEMENT

ಸಿಬಿಐಗೆ ಕಾಯಂ ನಿರ್ದೇಶಕರನ್ನು ನೇಮಿಸುವಂತೆ ಕೋರಿ ಸುಪ್ರೀಂಗೆ ಪಿಐಎಲ್‌

ಕಾಮನ್ ಕಾಸ್ ಸ್ವಯಂ ಸೇವಾಸಂಸ್ಥೆ ಅರ್ಜಿ ಸಲ್ಲಿಕೆ

ಪಿಟಿಐ
Published 4 ಮಾರ್ಚ್ 2021, 10:37 IST
Last Updated 4 ಮಾರ್ಚ್ 2021, 10:37 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆ – ಸಿಬಿಐಗೆ ಕಾಯಂ ನಿರ್ದೇಶಕರನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ಕಾಮನ್‌ ಕಾಸ್ ಎಂಬ ಸ್ವಯಂ ಸೇವಾ ಸಂಸ್ಥೆಯೊಂದು ಈ ಕುರಿತು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ಈ ಹಿಂದೆ ಸಿಬಿಐ ನಿರ್ದೇಶಕರಾಗಿದ್ದ ರಿಷಿ ಕುಮಾರ್ ಶುಕ್ಲಾ ಅವರ ಅಧಿಕಾರಾವಧಿ ಫೆ.2ಕ್ಕೆ ಕೊನೆಗೊಂಡಿದೆ. ತೆರವಾದ ಸ್ಥಾನಕ್ಕೆ ಸರ್ಕಾರ ಕಾಯಂ ನಿರ್ದೇಶಕರನ್ನು ನೇಮಿಸಬೇಕಿತ್ತು. ಅದರ ಬದಲಿಗೆ ಪ್ರವೀಣ್ ಸಿನ್ಹಾ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿದೆ. ದೆಹಲಿ ಸ್ಪಷಲ್ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್‌ (ಡಿಎಸ್‌ಪಿಇ) ಕಾಯ್ದೆಯ ಸೆಕ್ಷನ್ 4ಎ ಪ್ರಕಾರ ಕಾಯಂ ನಿರ್ದೇಶಕರನ್ನು ನೇಮಿಸುವಲ್ಲಿ ಸರ್ಕಾರ ವಿಫಲವಾಗಿದೆ‘ ಎಂದು ಸಂಸ್ಥೆ ಅರ್ಜಿಯಲ್ಲಿ ಆರೋಪಿಸಿದೆ.

ADVERTISEMENT

ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಲಾದ ಈ ಮನವಿಯಲ್ಲಿ, ಸಿಬಿಐ ನಿರ್ದೇಶಕರ ಆಯ್ಕೆಯ ಪ್ರಕ್ರಿಯೆ ಪೂರ್ಣಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.