ನವದೆಹಲಿ: ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಹಾಗೂ ಕೋವಿಡ್–19 ಹಬ್ಬದಂತೆ ಶವಸಂಸ್ಕಾರಕ್ಕೆ ಪರ್ಯಾಯ ವಿಧಾನಗಳನ್ನು ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಶುಕ್ರವಾರ ತಿರಸ್ಕರಿಸಿದೆ.
‘ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕಾಯ್ದೆಯ 2010ರ ಸೆಕ್ಷನ್ 14 ಮತ್ತು 15ರ ಅಡಿಯಲ್ಲಿ ಇದು ಪರಿಸರಕ್ಕೆ ಸಂಬಂಧಿಸಿದ ಗಣನೀಯ ಪ್ರಶ್ನೆಯಾಗಿಲ್ಲ’ ಎಂದು ಎನ್‌ಜಿಟಿಯ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ಅವರ ನೇತೃತ್ವದ ಪೀಠವು ಹೇಳಿದೆ.
ಆದಾಗ್ಯೂ, ‘ಅರ್ಜಿದಾರರು ಈ ವಿಷಯವನ್ನುಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸುವುದನ್ನು ತಡೆಯುವುದಿಲ್ಲ’ ಎಂದೂ ನ್ಯಾಯಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.