ADVERTISEMENT

ಸಮುದ್ರಕ್ಕೆ ತ್ಯಾಜ್ಯ ಸೇರುವುದಕ್ಕೆ ತಡೆ: ವರದಿ ಕೇಳಿದ ಎನ್‌ಜಿಟಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 15:44 IST
Last Updated 4 ಡಿಸೆಂಬರ್ 2019, 15:44 IST

ನವದೆಹಲಿ: ಒಳಚರಂಡಿ ಹಾಗೂ ಕೈಗಾರಿಕೆಗಳ ತ್ಯಾಜ್ಯ ಸಮುದ್ರ ಸೇರುವುದನ್ನು ತಡೆಯಲು ಕೈಗೊಂಡ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹಸಿರು ಮಂಡಳಿ (ಎನ್‌ಜಿಟಿ) ನಿರ್ದೇಶನ ನೀಡಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಕರ್ನಾಟಕ ಸೇರಿದಂತೆ ಕರಾವಳಿ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಂಡಳಿಯ ನ್ಯಾಯಮೂರ್ತಿ ಆದರ್ಶಕುಮಾರ್‌ ಗೋಯಲ್‌ ನೇತೃತ್ವದ ಪ್ರಧಾನ ಪೀಠ ನಿರ್ದೇಶಿಸಿದೆ.

‘ನಿಗದಿತ ಗಡುವಿನೊಳಗೆ ವರದಿ ಸಲ್ಲಿಸಲು ವಿಫಲವಾಗುವ ರಾಜ್ಯಗಳು, ಈ ನಿರ್ದೇಶನವನ್ನು ಪಾಲಿಸುವವರೆಗೆ ಪ್ರತಿ ತಿಂಗಳು ₹ 10 ಲಕ್ಷ ದಂಡ ಭರಿಸಬೇಕು’ ಎಂದೂ ಪೀಠ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.