ಟೋಲ್ ಪ್ಲಾಜಾ
(ಸಂಗ್ರಹ ಚಿತ್ರ)
ನವದೆಹಲಿ: ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್ ದರವನ್ನು ಶೇ 4ರಿಂದ ಶೇ 5ರಷ್ಟು ಹೆಚ್ಚಳ ಮಾಡಿದ್ದು, ಮಂಗಳವಾರದಿಂದಲೇ ಜಾರಿಯಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
‘ಪ್ರತಿವರ್ಷದಂತೆ ಈ ವರ್ಷವೂ ಟೋಲ್ ದರ ಹೆಚ್ಚಿಸಲಾಗಿದೆ. ಹಣದುಬ್ಬರ ಏರಿಕೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಪರಿಷ್ಕರಣೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.
2008ರ ನಿಯಮದಂತೆ ಪ್ರತಿ ವರ್ಷ ಏಪ್ರಿಲ್ 1ರಿಂದ ಅನ್ವಯವಾಗುವ ಹಾಗೆ ದರ ಹೆಚ್ಚಿಸಲಾಗುತ್ತದೆ. ಬೆಲೆ ಏರಿಕೆ, ಹಣದುಬ್ಬರವನ್ನು ಆಧರಿಸಿ ದರ ಹೆಚ್ಚಳ ಪ್ರಮಾಣವನ್ನು ನಿರ್ಧರಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.