ADVERTISEMENT

ದೇವದಾಸಿ ಪದ್ಧತಿ: ಕರ್ನಾಟಕ ಸೇರಿ 6 ರಾಜ್ಯ, ಕೇಂದ್ರ ವರದಿ ಕೇಳಿದ ಎನ್‌ಎಚ್‌ಆರ್‌ಸಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 16:00 IST
Last Updated 14 ಅಕ್ಟೋಬರ್ 2022, 16:00 IST

ನವದೆಹಲಿ: ದೇವದಾಸಿ ಪದ್ಧತಿ ನಿಷೇಧಿಸಿದ್ದರೂ ಈ ಪದ್ಧತಿ ಮುಂದುವರಿದಿರುವ ಮತ್ತು ಇದನ್ನು ತಡೆಗಟ್ಟಲು ಕಾನೂನು ಕ್ರಮ ತೆಗೆದುಕೊಂಡಿರುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಕರ್ನಾಟಕ ಸೇರಿ ಆರು ರಾಜ್ಯಗಳು ಮತ್ತು ಕೇಂದ್ರ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಶುಕ್ರವಾರ ಸೂಚನೆ ನೀಡಿದೆ.

ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಸಮಗ್ರ ವರದಿಗಳನ್ನು ಸಲ್ಲಿಸಲು ಆರು ವಾರಗಳ ಗಡುವನ್ನು ಎನ್‌ಎಚ್‌ಆರ್‌ಸಿ ನೀಡಿದೆ.

ವಿವಿಧ ದೇವಾಲಯಗಳಲ್ಲಿ, ವಿಶೇಷವಾಗಿ ದಕ್ಷಿಣ ಭಾರತದಲ್ಲಿ ದೇವದಾಸಿ ಪದ್ಧತಿ ಪಿಡುಗು ಮುಂದುವರಿದಿರುವ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತವಾಗಿ ಈ ಕ್ರಮ ತೆಗೆದುಕೊಂಡಿದೆ.

ADVERTISEMENT

ದೇವದಾಸಿ ಪದ್ಧತಿತಡೆಗಟ್ಟಲು,ದೇವದಾಸಿಯರು ಘನತೆಯಿಂದ ಬದುಕು ಸಾಗಿಸಲು ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಒದಗಿಸಲು ಕೈಗೊಂಡ ಅಥವಾ ಕೈಗೊಳ್ಳಬೇಕಿರುವ ಕ್ರಮಗಳನ್ನು ಉಲ್ಲೇಖಿಸಿ ಪೂರಕ ದತ್ತಾಂಶವನ್ನು ಒದಗಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಗೆ ಅದು ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.