ADVERTISEMENT

ನರಬಲಿ ಪ್ರಕರಣ: ಕೇರಳಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಪಿಟಿಐ
Published 15 ಅಕ್ಟೋಬರ್ 2022, 12:36 IST
Last Updated 15 ಅಕ್ಟೋಬರ್ 2022, 12:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇರಳದಲ್ಲಿ ಈಚೆಗೆ ನಡೆದ ನರಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡ ವರದಿಯನ್ನು ಕೋರಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಕೇರಳ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಆಯೋಗವು ನೋಟಿಸ್ ಜಾರಿ ಮಾಡಿದ್ದು, ತನಿಖೆಯ ಸ್ಥಿತಿ ಮತ್ತು ಸಂತ್ರಸ್ತೆಯರ ಕುಟುಂಬಗಳಿಗೆ ಪಾವತಿಸಿದ ಪರಿಹಾರವನ್ನು ಒಳಗೊಂಡಂತೆ ಕೈಗೊಂಡ ಕ್ರಮದ ವರದಿಯನ್ನು ನಾಲ್ಕು ವಾರಗಳ ಅವಧಿಯಲ್ಲಿ ಕಳುಹಿಸಿಕೊಡುವಂತೆ ಸೂಚಿಸಿದೆ.

‘ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ದಂಪತಿಗೆ ಅದೃಷ್ಟವನ್ನು ತಂದುಕೊಡುವುದಾಗಿ ನಂಬಿಸಿ, ಲಾಟರಿ ಟಿಕೆಟ್ ಮಾರುವ ವೃತ್ತಿಯಲ್ಲಿದ್ದ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಿರುವ ಕುರಿತು ಮಾಧ್ಯಮಗಳ ವರದಿಯನ್ನು ಗಮನಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಆಯೋಗದ ಸಮಿತಿಯು ಹೇಳಿದೆ.

ADVERTISEMENT

‘ಕಾನೂನಿನ ಭಯವಿಲ್ಲದೇ ಧಾರ್ಮಿಕ ಆಚರಣೆಯ ಹೆಸರಿನಲ್ಲಿ ಮನುಷ್ಯರನ್ನು ಕೊಲ್ಲುವ ಇಂಥ ಘಟನೆಗಳನ್ನು ನಾಗರಿಕ ಸಮಾಜದಲ್ಲಿ ನಿರೀಕ್ಷಿಸಲು ಸಾಧ್ಯವಿಲ್ಲ. ಆ ಇಬ್ಬರು ನತದೃಷ್ಟ ಮಹಿಳೆಯರ ಬದುಕುವ ಹಕ್ಕನ್ನು ಉಲ್ಲಂಘಿಸಲಾಗಿದೆ’ ಎಂದೂ ಆಯೋಗವು ಕಿಡಿಕಾರಿದೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.