ಪೊಲೀಸ್ – ಪ್ರಾತಿನಿಧಿಕ ಚಿತ್ರ
ನವದೆಹಲಿ: ಹುಬ್ಬಳ್ಳಿಯಲ್ಲಿ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಹಾಗೂ ಎನ್‌ಕೌಂಟರ್‌ನಲ್ಲಿ ಆರೋಪಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ನೀಡಲಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಬುಧವಾರ ತಿಳಿಸಿದೆ.
ಸಂತ್ರಸ್ತೆ ಮತ್ತು ಆರೋಪಿಯ ಮರಣೋತ್ತರ ಪರೀಕ್ಷೆ ವರದಿ ಹಾಗೂ ಮ್ಯಾಜಿಸ್ಟೀರಿಯಲ್ ತನಿಖಾ ವರದಿ ಸೇರಿ ಒಟ್ಟಾರೆ ವರದಿಯನ್ನು ನಾಲ್ಕು ವಾರಗಳ ಒಳಗಾಗಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 14ರಂದು ಬಾಲಕಿಯ ಅಪಹರಣ ಮತ್ತು ಹತ್ಯೆ ನಡೆದಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದರು. ಬಳಿಕ ಆರೋಪಿ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾಗಿ ಪೊಲೀಸರು ಘೋಷಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.