ಎನ್ಐಎ
(ಪಿಟಿಐ ಸಂಗ್ರಹ ಚಿತ್ರ)
ನವದೆಹಲಿ: ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಒಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಆರೋಪಿಯನ್ನು ಮೋತಿ ರಾಮ್ ಎಂದು ಗುರುತಿಸಲಾಗಿದೆ.
ಆರೋಪಿ ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (ಪಿಐಒ) ಹಂಚಿಕೊಳ್ಳುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾವರ್ಜನಿಕ ಮಾಹಿತಿ ಅಧಿಕಾರಿಗಳಿಂದ ಹಣವನ್ನು ಪಡೆಯುತ್ತಿದ್ದನು ಎಂದು ಎನ್‌ಐಎ ತಿಳಿಸಿದೆ.
ದೆಹಲಿಯಲ್ಲಿ ಮೋತಿ ರಾಮ್ ಅವರನ್ನು ಎನ್ಐಎ ಬಂಧಿಸಿದೆ. ಪಟಿಯಾಲ ಹೌಸ್ ವಿಶೇಷ ನ್ಯಾಯಾಲಯವು ಮೋತಿ ರಾಮ್ ಅವರನ್ನು ಜೂನ್ 6ರವರೆಗೆ ಎನ್‌ಐಎ ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.