ADVERTISEMENT

ಎನ್‌ಐಎ ದಾಳಿ: ಐಸಿಸ್‌ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಅಕ್ಟೋಬರ್ 2022, 14:47 IST
Last Updated 19 ಅಕ್ಟೋಬರ್ 2022, 14:47 IST
ಎನ್‌ಐಎ
ಎನ್‌ಐಎ   

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಾರಾಣಸಿ ಮತ್ತು ದೆಹಲಿಯ ಹಲವೆಡೆ ಬುಧವಾರ ದಾಳಿ ನಡೆಸಿದ್ದು, ಐಸಿಸ್‌ ಬೆಂಬಲಿತ ವ್ಯಕ್ತಿಯೊಬ್ಬನನ್ನು ಬಂಧಿಸಿದೆ.

ಬಸಿತ್ ಕಲಾಂ ಸಿದ್ದಿಕಿ ಬಂಧಿತ ಆರೋಪಿ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸೇರಿ (ಐಸಿಸ್‌) ಯುವಕರನ್ನು ಬಳಸಿಕೊಂಡು ದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.