ADVERTISEMENT

ಭಯೋತ್ಪಾದಕ ಚಟುವಟಿಕೆ: ಆಸ್ತಿ ಮುಟ್ಟುಗೋಲು

ಪಿಟಿಐ
Published 7 ಮಾರ್ಚ್ 2023, 14:39 IST
Last Updated 7 ಮಾರ್ಚ್ 2023, 14:39 IST
.
.   

ನವದೆಹಲಿ: ಭಯೋತ್ಪಾದಕರು ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಉತ್ತರದ ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಂಗ್‌ಸ್ಟರ್‌ಗಳಿಗೆ ಸೇರಿದ ಹರಿಯಾಣ ಮತ್ತು ದೆಹಲಿಯಲ್ಲಿರುವ ಐದು ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪಾಕಿಸ್ತಾನ ಮೂಲದ ಅರವಿಂದರ್ ರಿಂಡಾ, ಲಾರೆನ್ಸ್‌ ಬಿಷ್ಣೋಯ್‌ ಮತ್ತು ಬಾಂಬಿಹಾ ಗ್ಯಾಂಗ್‌ಗಳ ಕುರಿತು ಎನ್‌ಐಎ ತನಿಖೆ ನಡೆಸುತ್ತಿದ್ದು, ಇದರ ಅಂಗವಾಗಿ ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಎನ್ಐಎ ವಕ್ತಾರರು ಹೇಳಿದ್ದಾರೆ.

ಪಂಜಾಬ್‌, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಂಗ್‌ಸ್ಟರ್‌ಗಳಿಗೆ ಸೇರಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ ಎಂದಿದ್ದಾರೆ.

ADVERTISEMENT

ಈ ಗ್ಯಾಂಗ್‌ಗಳು ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದವು ಎಂದೂ ತಿಳಿಸಿದ್ದಾರೆ.

ಮಾರ್ಚ್‌ 4 ರಂದು ಕೂಡ ಗ್ಯಾಂಗ್‌ಸ್ಟರ್‌ಗಳಿಗೆ ಸೇರಿದ ಐದು ಆಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.