ADVERTISEMENT

ಗುಜರಾತ್‌ನಲ್ಲಿ ಎನ್‌ಐಎ ಶೋಧ: ಮೂವರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 10:58 IST
Last Updated 31 ಜುಲೈ 2022, 10:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್‌: ಐಎಸ್‌ (ಇಸ್ಲಾಮಿಕ್‌ ಸ್ಟೇಟ್‌) ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಗುಜರಾತ್‌ನ ನಾಲ್ಕು ಜಿಲ್ಲೆಗಳಲ್ಲಿ ಶೋಧ ನಡೆಸಿದೆ ಎಂದು ಸಂಸ್ಥೆ ತಿಳಿಸಿದೆ.

ಭರೂಚ್, ಸೂರತ್, ನವಸಾರಿ ಮತ್ತು ಅಹಮದಾಬಾದ್ ಜಿಲ್ಲೆಗಳಲ್ಲಿ ಶೋಧ ನಡೆಸಲಾಗಿದೆ. ಆರೋಪಕ್ಕೆ ಒಳಪಡಿಸುವ ದಾಖಲೆಗಳು ಮತ್ತು ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಲ್ಲೂ ಶೋಧ ನಡೆಸಲಾಗಿದೆ ಎಂದು ಎನ್‌ಐಎ ಹೇಳಿದೆ.

‘ಈ ಸಂಬಂಧ ಮೂವರನ್ನು ವಿಚಾರಣೆ ನಡೆಸಲಾಗಿದೆ. ಆದರೆ, ಸದ್ಯ ಯಾವುದೇ ಮಾಹಿತಿ ಬಹಿರಂಗ ಪಡಿಸುವುದಿಲ್ಲ’ ಎಂದು ಗುಜರಾತ್ ಎಟಿಎಸ್ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.