ADVERTISEMENT

ಸಶಸ್ತ್ರ ತರಬೇತಿ ಶಿಬಿರ ಆಯೋಜನೆ ಆರೋಪ: ಪಿಎಫ್‌ಐ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿ

ಪಿಟಿಐ
Published 19 ಏಪ್ರಿಲ್ 2023, 14:48 IST
Last Updated 19 ಏಪ್ರಿಲ್ 2023, 14:48 IST
.
.   

ನವದೆಹಲಿ: ದೇಶದಾದ್ಯಂತ ಸಶಸ್ತ್ರ ತರಬೇತಿ ಶಿಬಿರ ಆಯೋಜಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ರಾಷ್ಟ್ರೀಯ ಸಮನ್ವಯಾಧಿಕಾರಿ ಇಬ್ರಾಹಿಂ ಪುತನಾತನಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಫ್‌ಐ ಮತ್ತು ಅದರ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಇಬ್ರಾಹಿಂ ವಿರುದ್ಧದ ದೋಷಾರೋಪ ಪಟ್ಟಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಸ್ತ್ರಾಸ್ತ್ರ ಬಳಕೆ ಮಾಡುವ ಬಗ್ಗೆ ಸಂಘಟನೆ ಸದಸ್ಯರಿಗೆ ವ್ಯವಸ್ಥಿತ ತರಬೇತಿ ನೀಡಲಾಗುತ್ತಿದೆ. ದೈಹಿಕ ಮತ್ತು ಸಶಸ್ತ್ರ ತರಬೇತಿ ಕೋರ್ಸ್‌ಗಳಿಗೆ ಇಬ್ರಾಹಿಂ ಪಠ್ಯಕ್ರಮ ಅಭಿವೃದ್ಧಿಪಡಿಸುತ್ತಿದ್ದ. ದೇಶದ ಉದ್ದಗಲಕ್ಕೂ ಸಂಚರಿಸಿ ತರಬೇತಿ ಶಿಬಿರಗಳ ಮೇಲ್ವಿಚಾರಣೆ ವಹಿಸಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇದಕ್ಕೂ ಮೊದಲು ಕಳೆದ ಮಾರ್ಚ್‌ 18ರಂದು ಸಂಘಟನೆಯ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರು ಮತ್ತು ಹಿರಿಯ ಕಾರ್ಯಕರ್ತರ ವಿರುದ್ಧ ದೋಷರೋಪ ಪಟ್ಟಿ ಸಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.