ADVERTISEMENT

ಎನ್‌ಐಎ: ಪಿಎಫ್ಐನ ಸದಸ್ಯರ ವಿರುದ್ಧ ಪೂರಕ ದೋಷಾರೋಪ ಪಟ್ಟಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2023, 12:36 IST
Last Updated 17 ಮಾರ್ಚ್ 2023, 12:36 IST
.
.   

ನವದೆಹಲಿ: ಮುಸ್ಲಿಂ ಯುವಕರನ್ನು ಪ್ರಚೋದಿಸಿ, ತರಬೇತಿ ಶಿಬಿರಗಳಲ್ಲಿ ಶಸ್ತ್ರಾಸ್ತ್ರ ತರಬೇತಿ ನೀಡಿದ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಐವರು ಸದಸ್ಯರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಕ್ರಿಮಿನಲ್ ಪಿತೂರಿ, ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜನ ಆರೋಪದ ಮೇಲೆ ಶೇಖ್ ರಹೀಮ್, ಶೇಕ್ ವಹೈದ್ ಅಲಿ, ಜಫ್ರುಲ್ಲಾ ಖಾನ್ ಪಠಾಣ್, ಶೇಕ್ ರಿಯಾಜ್ ಅಹ್ಮದ್ ಮತ್ತು ಅಬ್ದುಲ್ ವಾರಿಸ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ನಿಬಂಧನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೈದರಾಬಾದ್‌ನ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿದ ಪೂರಕ ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ.

‘ಆರೋಪಿಗಳು ತರಬೇತಿ ಪಡೆದ ಪಿಎಫ್ಐ ಕಾರ್ಯಕರ್ತರಾಗಿದ್ದು, ಮುಸ್ಲಿಂ ಯುವಕರನ್ನು ಪ್ರಚೋದಿಸುವುದು ಮತ್ತು ಅವರನ್ನು ಪಿಎಫ್ಐಗೆ ನೇಮಕ ಮಾಡುವುದು ಹಾಗೂ ನಿರ್ದಿಷ್ಟವಾಗಿ ಆಯೋಜಿಸಲಾದ ಪಿಎಫ್ಐ ತರಬೇತಿ ಶಿಬಿರಗಳಲ್ಲಿ ಶಸ್ತ್ರಾಸ್ತ್ರ ತರಬೇತಿ ನೀಡುವುದು ಕಂಡು ಬಂದಿದೆ’ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ.

ADVERTISEMENT

2047 ರ ವೇಳೆಗೆ ದೇಶದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಹಿಂಸಾತ್ಮಕ ಭಯೋತ್ಪಾದಕ ಚಟುವಟಿಕೆ ನಡೆಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.