ಎನ್‌ಐಎ
(ಪಿಟಿಐ ಸಂಗ್ರಹ ಚಿತ್ರ)
ನವದೆಹಲಿ: ಭಯೋತ್ಪಾದನೆಗೆ ಸಂಚು ರೂಪಿಸಿದ ಪ್ರಕರಣ ಸಂಬಂಧ ವಿವಿಧ ಸಂಘಟನೆಗಳ ವಿರುದ್ಧ ಭೂಗತ ಕಾರ್ಯಕರ್ತರ ಶೋಧ ಕಾರ್ಯಾಚರಣೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಗುರುವಾರ ದಾಳಿ ನಡೆಸಿದೆ.
ಪುಲ್ವಾಮಾ, ಕುಲ್ಗಾಮ್, ಶೋಪಿಯಾನ್, ಬಾರಾಮುಲ್ಲಾ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಒಟ್ಟು 32 ಪ್ರದೇಶಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಅರೆಸೇನಾ ಪಡೆ ಸಿಬ್ಬಂದಿ ಜತೆಗೆ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.