ADVERTISEMENT

ಕೇರಳ: ಪಿಎಫ್‌ಐಗೆ ಸೇರಿದ ಹಲವು ಸ್ಥಳಗಳ ಮೇಲೆ ಎನ್‌ಐಎ ದಾಳಿ

ಪಿಟಿಐ
Published 29 ಡಿಸೆಂಬರ್ 2022, 6:26 IST
Last Updated 29 ಡಿಸೆಂಬರ್ 2022, 6:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರಂ: ಕೇರಳದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಎರಡನೇ ಹಂತದ ಮುಖಂಡರ ಮನೆಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದೆ.

ದಾಳಿಯು ಬುಧವಾರ ತಡರಾತ್ರಿಯಿಂದ ಆರಂಭಗೊಂಡಿದ್ದು, ಗುರುವಾರವೂ ಮುಂದುವರಿದೆ ಎಂದು ಕೇರಳ ಪೊಲೀಸ್‌ ಮೂಲಗಳು ತಿಳಿಸಿವೆ.

ರಾಷ್ಟ್ರದಲ್ಲಿ ಉಗ್ರ ಕೃತ್ಯಗಳಿಗೆ ಬೆಂಬಲಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕಳೆದ ಸೆಪ್ಟೆಂಬರ್‌ನಲ್ಲಿ ಎನ್‌ಐಎನ ಹಲವು ತಂಡಗಳು ದೇಶದಾದ್ಯಂತ ದಾಳಿ ನಡೆಸಿದ್ದವು. ಕೇರಳ ಸೇರಿದಂತೆ 15 ರಾಜ್ಯಗಳಲ್ಲಿ ಹಲವು ಪಿಎಫ್‌ಐ ಮುಖಂಡರನ್ನು ಬಂಧಿಸಿತ್ತು. ಇದನ್ನು ಪಿಎಫ್‌ಐ ವಿರುದ್ಧದ ಅತಿದೊಡ್ಡ ತನಿಖಾ ಕಾರ್ಯಾಚರಣೆ ಎನ್ನಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.