ADVERTISEMENT

ಭಯೋತ್ಪಾದನೆ ಪಿತೂರಿ: ಕರ್ನಾಟಕ ಸೇರಿ 21 ಕಡೆ ಎನ್‌ಐಎ ಶೋಧ

ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಮತ್ತು ಜಮ್ಮುವಿನಲ್ಲಿ ಕಾರ್ಯಾಚರಣೆ

ಪಿಟಿಐ
Published 9 ಸೆಪ್ಟೆಂಬರ್ 2025, 13:31 IST
Last Updated 9 ಸೆಪ್ಟೆಂಬರ್ 2025, 13:31 IST
<div class="paragraphs"><p>ಎನ್‌ಐಎ </p></div>

ಎನ್‌ಐಎ

   

ನವದೆಹಲಿ: ಐಸಿಸ್‌ ಮತ್ತು ಇತರ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಭಯೋತ್ಪಾದನೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 21 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿತು.

ಕರ್ನಾಟಕ ಅಲ್ಲದೆ ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಶೋಧ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಈ ವರ್ಷ ಜೂನ್‌ನಲ್ಲಿ ತಮಿಳುನಾಡು ಚೆಂಗಲ್‌ಪೆಟ್ಟು ಜಿಲ್ಲೆಯ ಕಾಯರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿದೆ. ಸೋಮವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಮೊಬೈಲ್‌ ಫೋನ್‌ ಸೇರಿದಂತೆ ಹಲವು ಡಿಜಿಟಲ್‌ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಎನ್‌ಐಎ ತಿಳಿಸಿದೆ.

ದೇಶದಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದ ಮೇಲೆ ಅಖ್ಲಾಥೂರ್ ಅಲಿಯಾಸ್ ಮೊಹಮ್ಮದ್ ಅಖ್ಲಾಕ್ ಮುಜಾಹಿದ್ ಬಂಧನದೊಂದಿಗೆ ಪ್ರಕರಣ ಬೆಳಕಿಗೆ ಬಂದಿತ್ತು. ಆತ ಪಾಕಿಸ್ತಾನ ಮತ್ತು ಸಿರಿಯಾದಲ್ಲಿನ ಅನೇಕ ಸಂಸ್ಥೆಗಳೊಂದಿಗೆ ನಂಟು ಹೊಂದಿದ್ದಾಗಿ ತನಿಖೆ ವೇಳೆ ಗೊತ್ತಾಗಿದೆ ಎಂದು ಎನ್‌ಐಎ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.